Sunday, 1 September 2013

ರಾಗರತಿ

-ಅಂಬಿಕಾತನಯದತ್ತ






ಮುಗಿಲ ಮಾರಿಗೆs ರಾಗರತಿಯ ನಂಜ ಏರಿತ್ತs
- ಆಗ – ಸಂಜೆಯಾಗಿತ್ತ;
ನೆಲದ ಅಂಚಿಗೆ ಮಂಜಿನ ಮುಸುಕು ಹ್ಯಾಂಗೋ ಬಿದ್ದಿತ್ತ
ಗಾಳಿಗೆ ಮೇಲಕ್ಕೆದ್ದಿತ್ತs
ಬಿದಿಗೆ ಚಂದ್ರನಾ ಚೊಗಚೀ – ನಗಿ – ಹೂ ಮೆಲ್ಲಗ ಮೂಡಿತ್ತ
ಮ್ಯಾಲಕ ಬೆಳ್ಳಿನ ಕೂಡಿತ್ತ;
ಇರುಳ ಹೆರಳಿನಾ ಅರಳಮಲ್ಲಿಗೀ ಜಾಳಿಗಿ ಹಾಂಗಿತ್ತ
ಸೂಸ್ಯಾವ ಚಿಕ್ಕಿ ಅತ್ತಿತ್ತ.ಬೊಗಸಿಗಣ್ಣಿನಾ ಬಯಕೆಯ ಹೆಣ್ಣು ನೀರಿಗೆ ಹೋಗಿತ್ತs
ತಿರುಗಿ ಮನೀಗೆ ಸಾಗಿತ್ತ;
ಕಾಮಿ ಬೆಕ್ಕಿನ್ಹಾಂಗ ಭಾಂವೀ ಹಾದಿ ಕಾಲಾಗ ಸುಳಿತಿತ್ತs
ಎರಗಿ ಹಿಂದಕ್ಕುಳಿತಿತ್ತ.ಮಳ್ಳಗಾಳಿ-ಸುಳಿ ಕಳ್ಳ ಕೈಲೆ ಸೆರಗನು ಹಿಡಿತಿತ್ತs
ಮತಮತ ಬೆರಗಿಲೆ ಬಿಡತ್ತಿತ್ತ;
ಒಂದ ಮನದ ಗಿಣಿ ಹಿಂದ ನೆಳ್ಳಿಗೆ ಬೆನ್ನಿಲೆ ಬರತಿತ್ತ
ತನ್ನ ಮೈಮರ ಮರತಿತ್ತ.


***

No comments:

Post a Comment